ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವೈಎಸ್ಪಿ ಹತ್ಯೆ: ನ್ಯಾಯಾಂಗ ತನಿಖೆಗೆ ಹರಿಯಾಣ ಸರ್ಕಾರ ಆದೇಶ

Last Updated 21 ಜುಲೈ 2022, 15:33 IST
ಅಕ್ಷರ ಗಾತ್ರ

ಚಂಡೀಗಡ:ಮೇವಾಟ್ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿವೈಎಸ್‌ಪಿ ಸುರೇಂದ್ರ ಸಿಂಗ್‌ ಅವರನ್ನು ಗಣಿ ಮಾಫಿಯಾ ಹತ್ಯೆ ಮಾಡಿರುವ ಪ್ರಕರಣದ ನ್ಯಾಯಾಂಗ ತನಿಖೆಗೆ ಹರಿಯಾಣ ಸರ್ಕಾರ ಆದೇಶಿಸಿದೆ.

ಹರಿಯಾಣದ ನೂಹ್‌ ಜಿಲ್ಲೆಯ ಅರಾವಳಿ ಬೆಟ್ಟ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿವೈಎಸ್‌ಪಿಸುರೇಂದ್ರ ಸಿಂಗ್‌ಮೇಲೆ ಅಕ್ರಮ ಕಲ್ಲುಗಣಿಗಾರಿಕೆ ಮಾಫಿಯಾದವರು ಟ್ರಕ್‌ಹರಿಸಿ ಮಂಗಳವಾರ ಹತ್ಯೆ ಮಾಡಿದ್ದರು.

ಈ ಪ್ರಕರಣದನ್ಯಾಯಾಂಗ ತನಿಖೆಗೆ ಸರ್ಕಾರ ತೀರ್ಮಾನಿಸಿದೆ. ಅರಾವಳಿ ಬೆಟ್ಟ ಪ್ರದೇಶದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು.ಅಕ್ರಮ ಗಣಿಗಾರಿಕೆ ಸೇರಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಬಿಜೆಪಿ ನೇತೃತ್ವದ ಸರ್ಕಾರವು ಕಠಿಣ ಕಾನೂನು ಕ್ರಮ ಜರುಗಿಸಲಿದೆ ಎಂದು ವಿಜ್ ತಿಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಬ್ಬೀರ್ ಅಲಿಯಾಸ್ ಮಿತ್ತರ್‌ನನ್ನು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಇಕ್ಕರ್‌ನನ್ನು ನೂಹ್‌ ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಸುಪ್ರೀಂ ಸಮ್ಮತಿ: ಡಿವೈಎಸ್‌ಪಿ ಹತ್ಯೆಗೆ ಸಂಬಂಧಿಸಿದಂತೆ ನಡೆಯುವ ಕಾರ್ಯಪಾಲನಾ ವರದಿಯನ್ನು (ಎಟಿಆರ್‌) ಪರಿಶೀಲಿಸಬೇಕೆಂದು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ ಸೂಚಿಸಿದೆ. ಈ ಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆಯ ಮೇಲ್ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್‌ ನೇತ್ವತ್ವದ ಪೀಠ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT