ಮಂಗಳವಾರ, ಸೆಪ್ಟೆಂಬರ್ 21, 2021
21 °C
5 ಜಿ ವೈರ್‌ಲೆಸ್ ತಂತ್ರಜ್ಞಾನದ ವಿರುದ್ಧದ ಪ್ರಕರಣ

ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಾಪಸ್‌ ಪಡೆದ ಜೂಹಿ ಚಾವ್ಲಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 5 ಜಿ ವೈರ್‌ಲೆಸ್ ತಂತ್ರಜ್ಞಾನದ ವಿರುದ್ಧದ ತಮ್ಮ ಅರ್ಜಿಯನ್ನು ವಜಾಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಬಾಲಿವುಡ್‌ ನಟಿ ಜೂಹಿ ಚಾವ್ಲಾ ವಾಪಸ್‌ ಪಡೆದಿದ್ದಾರೆ.

ನ್ಯಾಯಮೂರ್ತಿ ಜಯಂತ್‌ ನಾಥ್‌ ಅರ್ಜಿಯನ್ನು ವಾಪಸ್‌ ಪಡೆಯಲು ಅವಕಾಶ ಕಲ್ಪಿಸಿದರು.

5ಜಿ ವೈರ್‌ಲೈಸ್‌ ತಂತ್ರಜ್ಞಾನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ‘ವಜಾಗೊಳಿಸಲಾಗಿದೆ’ ಎನ್ನುವ ಬದಲು ‘ತಿರಸ್ಕರಿಸಲಾಗಿದೆ’ ಎಂದು ಘೋಷಿಸುವಂತೆ ಕೋರಿ ಚಾವ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ದೇಶದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದರ ವಿರುದ್ಧ ಜೂನ್‌ ತಿಂಗಳಲ್ಲಿ ಚಾವ್ಲಾ ಮತ್ತು ಇತರ ಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್, ₹20 ಲಕ್ಷ ದಂಡ ವಿಧಿಸಿತ್ತು. ಇದು ಪ್ರಚಾರಕ್ಕಾಗಿ ಮಾಡಿದ್ದು ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು