ಬುಧವಾರ, ಸೆಪ್ಟೆಂಬರ್ 22, 2021
23 °C

ಫೆಬ್ರುವರಿ ಬಳಿಕ ಕೇವಲ 6 ಬಾರಿ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಈ ವರ್ಷದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ ಗಡಿ ನಿಯಂತ್ರಣ ರೇಖೆಯಲ್ಲಿ ಕೇವಲ  6 ಬಾರಿ ಕದನ ವಿರಾಮ ಉಲ್ಲಂಘಿಸಿದ ವರದಿಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿತು.

ಈ ಕುರಿತು ಲಿಖಿತ ಉತ್ತರ ನೀಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ‘2018 ರಲ್ಲಿ 2,140, 2019ರಲ್ಲಿ 3,479 ಮತ್ತು ಕಳೆದ ವರ್ಷ (2020ರಲ್ಲಿ) 5,133 ಕದನ ವಿರಾಮ ಉಲ್ಲಂಘಿಸಿದ ಘಟನೆಗಳು ವರದಿಯಾಗಿವೆ’ ಎಂದು ಅವರು ಮಾಹಿತಿ ನೀಡಿದರು.

ದೇಶದ ಗಡಿ ಭಾಗದಲ್ಲಿ ಕದನ ವಿರಾಮ ಒಪ್ಬಂದ ಕುರಿತು ಉಭಯ ರಾಷ್ಟ್ರಗಳ ಸೇನಾ ಮುಖ್ಯಸ್ಥರ ನಡುವೆ ನಡೆದ ಮಾತುಕತೆಯ ನಂತರ, ಫೆಬ್ರವರಿ 25, 2021ರಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಒಪ್ಪಂದವನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಒಪ್ಪಿ ಸಹಿ ಹಾಕಿದ್ದವು. ಫೆ. 24–25, 2021ರ ಮಧ್ಯರಾತ್ರಿಯಿಂದ ಗಡಿ ನಿಯಂತ್ರಣ ರೇಖೆ ಮತ್ತು ಇತರ ಎಲ್ಲ ವಲಯಗಳಲ್ಲಿರುವ ಗಡಿಯುದ್ದಕ್ಕೂ ಈ ಒಪ್ಪಂದ ಅನ್ವಯವಾಗುತ್ತದೆ ಎಂದು ಪ್ರಕಟಿಸಲಾಗಿತ್ತು.

ಈ ವರ್ಷದ ಜನವರಿಯಲ್ಲಿ 380 ಹಾಗೂ ಫೆಬ್ರವರಿಯಲ್ಲಿ 278 ಬಾರಿ ಕದನ ವಿರಾಮ ಉಲ್ಲಂಘನೆಯ ಘಟನೆಗಳು ವರದಿಯಾಗಿವೆ. ಮಾರ್ಚ್‌ನಲ್ಲಿ ಯಾವುದೇ ಘಟನೆಗಳೂ ನಡೆದ ವರದಿಯಾಗಿಲ್ಲ. ಏಪ್ರಿಲ್‌ನಲ್ಲಿ ಒಂದು ಮತ್ತು ಮೇನಲ್ಲಿ ಮೂರು ಹಾಗೂ ಜೂನ್‌ ನಲ್ಲಿ ಎರಡು ಘಟನೆಗಳು ವರದಿಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು