ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ
ಬೆಂಗಳೂರು: ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
My best wishes to Justice Alok Aradhe! pic.twitter.com/hBQuEGTXDJ
— Kiren Rijiju (@KirenRijiju) June 30, 2022
ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನ್ಯಾಯಮೂರ್ತಿ ಅವಸ್ಥಿ ಅವರು ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ.
ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.