ಶನಿವಾರ, ಮಾರ್ಚ್ 25, 2023
27 °C

ಮುಖ್ಯನ್ಯಾಯಮೂರ್ತಿ ಸ್ಥಾನಕ್ಕೆ ಚಂದ್ರಚೂಡ್‌ ಅವರನ್ನು ನೇಮಿಸಿದ ರಾಷ್ಟ್ರಪತಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯನ್ಯಾಯಮೂರ್ತಿಯನ್ನಾಗಿ ಸೋಮವಾರ ನೇಮಕ ಮಾಡಿದ್ದಾರೆ.

ಈ ನೇಮಕಾತಿಯೂ ನವೆಂಬರ್ 9, 2022 ರಿಂದ ಜಾರಿಗೆ ಬರಲಿದ್ದು, ಅಂದು ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮುಖ್ಯನ್ಯಾಯಮೂರ್ತಿ ಯು ಯು ಲಲಿತ್ ಅವರು ಅಕ್ಟೋಬರ್ 11ರಂದು ನ್ಯಾ. ಚಂದ್ರಚೂಡ್‌ ಅವರನ್ನು ಮುಖ್ಯನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ಈ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಚಂದ್ರಚೂಡ್ ಅವರ ಅವಧಿಯು 2024ರ ನವೆಂಬರ್ 10 ರವರೆಗೆ ಇರಲಿದೆ.

ಮುಂದಿನ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಕೇಂದ್ರ ಕಾನೂನು ಮತ್ತು ನ್ಯಾಯಮೂರ್ತಿ ಕಿರಣ್ ರಿಜಿಜು ಅಭಿನಂದಿಸಿದ್ದಾರೆ.

ಭಾರತದ ಸಂವಿಧಾನವು ನೀಡಿರುವ ಅಧಿಕಾರದನ್ವಯ ರಾಷ್ಟ್ರಪತಿಗಳು ನ್ಯಾ. ಚಂದ್ರಚೂಡ್ ಅವರನ್ನು ನವೆಂಬರ್ 9ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು