ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಗೌರಿ ಪ್ರಮಾಣ: ಸಂವಿಧಾನ ಪೀಠದ ಆದೇಶ ಪಾಲಿಸಿದ್ದೇವೆ: ಸುಪ್ರೀಂ ಕೋರ್ಟ್‌

Last Updated 10 ಫೆಬ್ರುವರಿ 2023, 12:33 IST
ಅಕ್ಷರ ಗಾತ್ರ

ನವದೆಹಲಿ: ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರು ಮದ್ರಾಸ್‌ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕು ಎಂದು ಕೋರಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್‌, ಅದಕ್ಕೆ ಕಾರಣವನ್ನು ಶುಕ್ರವಾರ ಬಹಿರಂಗಪಡಿಸಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ನೇತೃತ್ವದ ನ್ಯಾಯಪೀಠವು ‘ಸಂವಿಧಾನ ಪೀಠದ ತೀರ್ಪನ್ನು ಪಾಲಿಸಿದ್ದೇವೆ ಮತ್ತು ಅದನ್ನು ಪ್ರಶ್ನಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ.

ತೀರ್ಪಿನ ವಿವರವು ಇನ್ನಷ್ಟೇ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟವಾಗಬೇಕಿದೆ.

ಮದ್ರಾಸ್‌ ಹೈಕೋರ್ಟ್‌ ಮೂವರು ವಕೀಲರು ಸಲ್ಲಿಸಿದ್ದ ಅರ್ಜಿ ಸೇರಿದಂತೆ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಫೆ.7ರಂದು ವಜಾಗೊಳಿಸಿತ್ತು. ಅರ್ಜಿ ವಜಾಕ್ಕೂ ಕೆಲವೇ ನಿಮಿಷಗಳ ಮುನ್ನ ಗೌರಿ ಅವರು ಮದ್ರಾಸ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT