ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂಕೋರ್ಟ್‌ನ 48ನೇ ಸಿಜೆಐಯಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

Last Updated 24 ಏಪ್ರಿಲ್ 2021, 17:37 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನೂತಲಪಾಟಿ ವೆಂಕಟ ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅವರು ದೇವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಉಪಸ್ಥಿತರಿದ್ದರು.

ರಮಣ ಅವರ ಅಧಿಕಾರಾವಧಿ 16 ತಿಂಗಳು ಇದ್ದು, ಮುಂದಿನ ವರ್ಷ ಆಗಸ್ಟ್‌ 26ರಂದು ನಿವೃತ್ತರಾಗುವರು ಎಂದು ಮೂಲಗಳು ತಿಳಿಸಿವೆ.

63 ವರ್ಷದ ನ್ಯಾಯ ಮೂರ್ತಿ ರಮಣ ಅವರು ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯವರು. ವಿದ್ಯಾರ್ಥಿ ಚಳವಳಿಯಲ್ಲಿ ಸಕ್ರಿಯರಾಗಿದ್ದ ಅವರು ವಕೀಲ ವೃತ್ತಿ ಆರಂಭಿಸುವ ಮುನ್ನ ಕೆಲ ಕಾಲ ಪತ್ರಕರ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT