ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

Last Updated 11 ಅಕ್ಟೋಬರ್ 2022, 7:01 IST
ಅಕ್ಷರ ಗಾತ್ರ

ನವದೆಹಲಿ:ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಈ ವಿಚಾರವನ್ನುಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜುಟ್ವಿಟರ್‌ನಲ್ಲಿ ಖಚಿತಪಡಿಸಿದ್ದು,'ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ' ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕಳೆದ ತಿಂಗಳ ಕೊನೆಯಲ್ಲಿ ಶಿಫಾರಸುಗಳನ್ನು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT