ಹಿಮಾಚಲ ಪ್ರದೇಶ: ಹಂಗಾಮಿ ನ್ಯಾಯಮೂರ್ತಿಯಾಗಿ ಸಬೀನಾ ನೇಮಕ

ನವದೆಹಲಿ: ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಬೀನಾ ಅವರನ್ನು ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.
ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಮ್ಜದ್ ಅಹ್ತೇಶಮ್ ಸಯೀದ್ ಅವರು ಜನವರಿ 21ಕ್ಕೆ ನಿವೃತ್ತಿ ಹೊಂದಲಿದ್ದಾರೆ. ನಂತರ ನ್ಯಾಯಮೂರ್ತಿ ಸಬೀನಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಭಾರತ ಸಂವಿಧಾನದ 223 ನೇ ಪ್ರಕಾರ ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಜಸ್ಟೀಸ್ ಸಬೀನಾ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಅವರು ನೇಮಕ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು 65 ನೇ ವಯಸ್ಸಿನಲ್ಲಿ ನಿವೃತ್ತರಾದರೆ, ಹೈಕೋರ್ಟ್ ನ್ಯಾಯಾಮೂರ್ತಿಗಳು 62 ನೇ ವಯಸ್ಸಿನಲ್ಲಿ ನಿವೃತ್ತಿ ಹೊಂದುತ್ತಾರೆ.
ಇದನ್ನು ಓದಿ: ಕೇಜ್ರಿವಾಲ್ ಆರೋಪಗಳು ದಾರಿ ತಪ್ಪಿಸುವ, ಅವಹೇಳನಕಾರಿಯಾಗಿವೆ: ಲೆ. ಗವರ್ನರ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.