ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾದ ಸಿಂಧಿಯಾಗೆ ಮಂತ್ರಿಗಿರಿ

Last Updated 7 ಜುಲೈ 2021, 16:49 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ ಒಂದು ವರ್ಷದ ತರುವಾಯ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ. ಆ ಮೂಲಕ ಬಿಜೆಪಿಯು ಸಿಂಧಿಯಾ ಅವರಿಗೆ ಉಡುಗೊರೆ ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಿಂಧಿಯಾ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

2020ರ ಮಾರ್ಚ್‌ನಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಅವರು ಬಳಿಕ ಬಿಜೆಪಿ ಸೇರಿದ್ದರು. ಪರಿಣಾಮವಾಗಿ ಕಮಲನಾಥ್ ನೇತೃತ್ವದ ಮಧ್ಯ ಪ್ರದೇಶ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 15 ತಿಂಗಳುಗಳಲ್ಲೇ ಪತನಗೊಂಡಿತ್ತು. ಸಿಂಧಿಯಾ ಅವರು ಬಿಜೆಪಿ ಸೇರಿದ ಬಳಿಕ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆರಿತು.

2018ರ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲು ಸೂಚಿಸಿದ ಬಳಿಕ ಸಿಂಧಿಯಾ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು. ಪಕ್ಷದ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು.

1971ರ ಜನವರಿ 1ರಂದು ಜನಿಸಿರುವ ಸಿಂಧಿಯಾ 2002ರಿಂದ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ. ತಂದೆ ಮಾಧವ ರಾವ್ ಸಿಂಧಿಯಾ ಅವರ ಹಠಾತ್ ನಿಧನದಿಂದ ತೆರವಾದ ಗುನಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT