ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ರಾಜಕಾರಣಕ್ಕೆ ಕೆಸಿಆರ್; ಭಾರತ ರಾಷ್ಟ್ರ ಸಮಿತಿ ಎಂದು ಮರುನಾಮಕರಣ

Last Updated 5 ಅಕ್ಟೋಬರ್ 2022, 11:09 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬದಲಾಯಿಸಿದ್ದಾರೆ.

ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲು ಕೆಸಿಆರ್ ಸಜ್ಜಾಗಿದ್ದಾರೆ.

ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮರುನಾಮಕರಣದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ, ಕೆಸಿಆರ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.

ಟಿಆರ್‌ಎಸ್ ಇನ್ನು ಮುಂದೆ ಬಿಆರ್‌ಎಸ್ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ. 'ರಾಷ್ಟ್ರೀಯ ನಾಯಕ ಕೆಸಿಆರ್ ಜಿಂದಾಬಾದ್' ಇತ್ಯಾದಿ ಜಯಘೋಷವನ್ನು ಬೆಂಬಲಿಗರು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT