ಶನಿವಾರ, ಜನವರಿ 23, 2021
18 °C

ಪ್ರಚಾರ ಆರಂಭಿಸಲಿರುವ ಕಮಲ್‌ ಹಾಸನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ‘ಮಕ್ಕಳ್‌ ನೀದಿ ಮೈಯಂ’ (ಎಂಎನ್‌ಎಂ) ಪಕ್ಷದ ಸ್ಥಾಪಕ ಹಾಗೂ ನಟ ಕಮಲ್‌ ಹಾಸನ್‌ ಅವರು ಇದೇ 13ರಿಂದ ಪ್ರಚಾರ ಆರಂಭಿಸಲಿದ್ದಾರೆ.

‘ಕಮಲ್‌ ಅವರು 13ರಿಂದ 16ರವರೆಗೆ ಮೊದಲ ಹಂತದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಮದುರೈ, ಥೇನಿ, ದಿಂಡಿಗಲ್‌, ವಿರುಧನಗರ, ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಪಕ್ಷದ ಉಪಾಧ್ಯಕ್ಷ ಆರ್‌.ಮಹೇಂದ್ರನ್‌ ಅವರು ಗುರುವಾರ ತಿಳಿಸಿದ್ದಾರೆ.

ಕಮಲ್‌ ಅವರು 2018ರ ಫೆಬ್ರುವರಿಯಲ್ಲಿ ಎಂಎನ್‌ಎಂ ಪಕ್ಷವನ್ನು ಸ್ಥಾಪಿಸಿದ್ದರು. 2019 ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಒಂದು ಸ್ಥಾನವನ್ನೂ ಗೆಲ್ಲಲಾಗಿರಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು