ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಕುಟುಂಬ, ಜಿ–23 ನಾಯಕರ ಸಂಧಾನಕ್ಕೆ ಮುಂದಾದ ಕಮಲ ನಾಥ್

Last Updated 5 ಅಕ್ಟೋಬರ್ 2021, 8:32 IST
ಅಕ್ಷರ ಗಾತ್ರ

ನವದೆಹಲಿ: ಗಾಂಧಿ ಕುಟುಂಬ ಮತ್ತು ಪಕ್ಷದಲ್ಲಿ ಬದಲಾವಣೆಗೆ ಒತ್ತಾಯಿಸುತ್ತಿರುವ ಜಿ -23 ಗುಂಪಿನ ನಡುವೆ ವರ್ಷದ ಹಿಂದೆ ಸಂಧಾನಕಾರರಾಗಿ ಕೆಲಸ ಮಾಡಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ಕಮಲ ನಾಥ್ ಮತ್ತೊಮ್ಮೆ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್ ಮತ್ತು ಭೂಪೇಂದರ್ ಸಿಂಗ್ ಹೂಡಾ ಅವರನ್ನು ಕಮಲ ನಾಥ್ ಭೇಟಿ ಮಾಡಿದ್ದು, ಪಕ್ಷದೊಳಗಿನ ಸಮಸ್ಯೆಗಳನ್ನು ಚರ್ಚಿಸಿದ್ದಾರೆ ಮತ್ತು ಜಿ23 ನಾಯಕರು ಎತ್ತಿರುವ ಪ್ರಶ್ನೆಗಳ ಬಗ್ಗೆ ಗಮನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗಿದ ನಂತರ ಸಿಬಲ್ ನಿವಾಸಕ್ಕೆ ಭೇಟಿ ನೀಡಿದ ಮೊದಲಿಗರು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ವಿಷಯಗಳ ಬಗ್ಗೆ ಸಂಪೂರ್ಣ ಸಮಾಲೋಚನೆ ಮತ್ತು ಪಕ್ಷದೊಳಗಿನ ಚುನಾವಣೆಗಳ ಜೊತೆಗೆ ಪ್ರಮುಖ ಹುದ್ದೆಗಳ ನೇಮಕಾತಿಯ ಬಗ್ಗೆ ಜಿ–23 ಗುಂಪು ಚರ್ಚೆಗಳನ್ನು ಬಯಸುತ್ತಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ, ಪಂಜಾಬ್ ಸಿಎಂ ಆಯ್ಕೆ ಕುರಿತಂತೆ ಮಾತನಾಡಿದ್ದ ಕಪಿಲ್ ಸಿಬಲ್ ಅವರು ಪಕ್ಷದಲ್ಲಿ ಪೂರ್ಣ ಪ್ರಮಾಣದ ಅಧ್ಯಕ್ಷರೇ ಇಲ್ಲದಿರುವಾಗ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೋ ಗೊತ್ತಾಗುತ್ತಿಲ್ಲ ಎಂದಿದ್ದರು. ಆ ಬಳಿಕ, ದೆಹಲಿಯ ಕಾಂಗ್ರೆಸ್ ಸಮಿತಿಯ ಸದಸ್ಯರು ಮತ್ತು ಕಾರ್ಯಕರ್ತರು ಸಿಬಲ್ ನಿವಾಸದ ಬಳಿ ಗದ್ದಲ ಸೃಷ್ಟಿಸಿ ಪ್ರತಿಭಟನೆ ನಡೆಸಿದ್ದರು.

ಮೂಲಗಳ ಪ್ರಕಾರ, ಕಮಲ ನಾಥ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಮಲ ನಾಥ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಾಡಿದ ಆಪಾದನೆಗೆ ಉತ್ತರಿಸುವಾಗ ಪಕ್ಷದಲ್ಲಿ ಬೇರೆ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಸುಳಿವು ನೀಡಿದ್ದಾರೆ.

ಇದೇವೇಳೆ, ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ‘ದಮನಕಾರಿ ನೀತಿಯಾಗಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇವೆ’ಎಂದು ರಾಜ್ಯಸಭೆಯ ಕಾಂಗ್ರೆಸ್‌ನ ಉಪ ನಾಯಕ ಆನಂದ್ ಶರ್ಮಾ ಮತ್ತು ಕಪಿಲ್ ಸಿಬಲ್ ಸೇರಿ ಟಿ23 ನಾಯಕರು ಹೇಳಿರುವುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT