ನವದೆಹಲಿ: ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಪಕ್ಷದಲ್ಲಿ ಮಹತ್ವದ ಜವಾಬ್ದಾರಿ ಸಿಗಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಭೇಟಿ ನಡೆದಿರುವುದು ಕುತೂಹಲ ಕೆರಳಿಸಿದೆ.
ಪುನರ್‌ರಚನೆಗೊಳ್ಳಲಿರುವ ಕಾಂಗ್ರೆಸ್ ಸಂಘಟನೆಯಲ್ಲಿ ದೊಡ್ಡ ಸ್ಥಾನವೊಂದಕ್ಕೆ ಕಮಲ್ ನಾಥ್ ಹೆಸರು ಕೇಳಿಬರುತ್ತಿದೆ.
ಕಮಲ್‌ನಾಥ್ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ಗಾಂಧಿ ಕುಟುಂಬ ಮಾತ್ರವಲ್ಲದೆ, ಕಾಂಗ್ರೆಸ್‌ನ ಸಂಘಟನೆಯ ಕುರಿತು ಪತ್ರ ಬರೆದು ಸುದ್ದಿಯಾಗಿದ್ದ 23 ನಾಯಕರ ಬಣದೊಂದಿಗೂ ಸುಮಧುರ ಸಂಬಂಧ ಹೊಂದಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಈ ಭೇಟಿ ನಡೆದಿದೆ. ಅಲ್ಲದೆ, ಕಮಲ್ ನಾಥ್ ಕೆಲವು ವಿರೋಧ ಪಕ್ಷಗಳ ಮುಖಂಡರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.
ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಕೂಟ ರಚನೆ ಮಾಡಲು ಮಹಾರಾಷ್ಟ್ರದ ಹಿರಿಯ ನಾಯಕ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ದೇಶದ ಹಲವು ನಾಯಕರನ್ನು ಭೇಟಿಯಾಗುತ್ತಿರುವ ನಡುವೆಯೇ, ಕಮಲ್ ನಾಥ್ ಅವರು ಪವಾರ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದರು.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್?
ಕಾಂಗ್ರೆಸ್ ಮತ್ತು ಹಲವು ಪಕ್ಷಗಳ ನಾಯಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಕಮಲ್ ನಾಥ್ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವ ಚಿಂತನೆ ನಡೆಯುತ್ತಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ಈ ವರದಿಗಳನ್ನು ಕಮಲನಾಥ್ ನಿರಾಕರಿಸಿರುವುದಾಗಿ ರಾಷ್ಟ್ರೀಯ ಸುದ್ದಿ ವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.