ಬೆತುಲ್ (ಮ.ಪ್ರದೇಶ): ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದ ಸ್ಥಳಕ್ಕೆ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಪ್ರಯೋಗಿಸಿದ್ದಾರೆ ಎಂದುಅಧಿಕಾರಿಗಳುತಿಳಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದಂತೆ ಅನೇಕ ವಿಷಯಗಳ ಕುರಿತಾಗಿ ಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್ ವಿವಾದಕ್ಕೊಳಗಾಗಿದ್ದರು.

ಕಂಗನಾ ರಣಾವತ್ ಕ್ಷಮೆ ಯಾಚನೆ ನಡೆಸಬೇಕೆಂಬ ಬೇಡಿಕೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿದ್ಯುತ್ ಕೇಂದ್ರದ ಕಲ್ಲಿದ್ದಲು ನಿರ್ವಹಣಾ ಘಟಕದಲ್ಲಿ ಕಂಗನಾ ಸಿನಿಮಾ ಶೂಟಿಂಗ್‌ನಲ್ಲಿ ನಿರತವಾಗಿದ್ದರು.

ಇದನ್ನೂ ಓದಿ:ಬಾಲಿವುಡ್ನ ಖ್ಯಾತ ನಟಿಯರ ಜಗಳಕ್ಕೆ ಕಾರಣವಾದ ಪಾಪ್ ಗಾಯಕಿ ರಿಹಾನ್ನಾ ಟ್ವೀಟ್

ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸೂಚನೆಯಂತೆ ಕಂಗನಾ ಚಿತ್ರೀಕರಣದ ಪ್ರದೇಶದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 17ರ ವರೆಗೆ ಚಿತ್ರೀಕರಣ ಮುಂದುವರಿಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.