ಭಾನುವಾರ, ಏಪ್ರಿಲ್ 11, 2021
29 °C

ಮಾನನಷ್ಟ ದೂರು: ಸೆಷನ್ಸ್‌ ಕೋರ್ಟ್‌ಗೆ ಕಂಗನಾ ರನೋಟ್‌ ಮೇಲ್ಮನವಿ

ಪಿಟಿಐ  Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಗೀತೆರಚನೆಕಾರ ಜಾವೇದ್‌ ಅಖ್ತರ್‌ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಹೊರಡಿಸಿರುವ ಜಾಮೀನು ಸಹಿತ ವಾರಂಟ್‌ ಕ್ರಮವನ್ನು ಪ್ರಶ್ನಿಸಿ ನಟಿ ಕಂಗನಾ ರನೋಟ್‌ ಇಲ್ಲಿನ ಸೆಷನ್ಸ್‌ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕಂಗನಾ ಬುಧವಾರ ಅರ್ಜಿ ಸಲ್ಲಿಸಿದ್ದು, ಇದು ಮಾರ್ಚ್‌ 15ರಂದು ವಿಚಾರಣೆಗೆ ಬರಲಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.

ನ್ಯಾಯಾಲಯಕ್ಕೆ ಹಾಜರಾಗದೇ ಇದ್ದಿದ್ದಕ್ಕೆ ಅಂಧೇರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಾರ್ಚ್‌ 1ರಂದು ವಾರಂಟ್‌ ನೀಡಿತ್ತು.

ಫೆಬ್ರುವರಿ ತಿಂಗಳಲ್ಲಿಯೇ ಮಾರ್ಚ್‌ 1ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಂಗನಾಗೆ ಸಮನ್ಸ್‌ ನೀಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು