ಬುಧವಾರ, ಆಗಸ್ಟ್ 10, 2022
23 °C

ಮುಂಬೈ ನಗರವು ಪಾಕ್‌ ಆಕ್ರಮಿತ ಕಾಶ್ಮೀರದಂತೆ ಏಕೆ ಭಾಸವಾಗುತ್ತಿದೆ: ಕಂಗನಾ ವಿವಾದ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬೈ ನಗರವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಏಕೆ ಭಾಸವಾಗುತ್ತಿದೆ ಎಂದು ಬಾಲಿವುಡ್‌ ನಟಿ ಕಂಗನಾ ರನೋಟ್‌ ಪ್ರಶ್ನಿಸಿದ್ದಾರೆ. ಆ ಮೂಲಕ ವಿವಾದದ ಕಿಡಿಯೊಂದನ್ನು ಅವರು ಹೊತ್ತಿಸಿದ್ದಾರೆ.  

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಶಿವಸೇನಾ ನಾಯಕ ಸಂಜಯ್‌ ರಾವತ್ ನನಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ನಾನು ಮುಂಬೈಗೆ ಹಿಂತಿರುಗಬಾರದೆಂದು ಅವರು ಹೇಳಿದ್ದಾರೆ. ಈ ಹಿಂದೆ ಮುಂಬೈನ ಬೀದಿ ಗೋಡೆಗಳ ಮೇಲೆ ಆಜಾದಿಯ ಬರಹಗಳು ಕಾಣಿಸಿಕೊಳ್ಳುತ್ತಿದ್ದವು. ಈಗ ಬಹಿರಂಗ ಬೆದರಿಕೆಗಳು ಕೇಳಿಬರುತ್ತಿವೆ. ಮುಂಬೈ ನಗರ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಏಕೆ ಭಾಸವಾಗುತ್ತಿದೆ?' ಎಂದು ಕಂಗನಾ ರನೋಟ್ ತಿಳಿಸಿದ್ದಾರೆ. 

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಜಯ್‌ ರಾವತ್, 'ಈ ಹಿಂದೆ ನಗರದಲ್ಲಿ ವಾಸವಾಗಿದ್ದರೂ ಮುಂಬೈ ಪೊಲೀಸರ ಮೇಲೆ ಬೆರಳು ತೋರಿಸುತ್ತಿರುವ ಅವರ ವಿಶ್ವಾಸಘಾತುಕತನ ನಾಚಿಕೆಗೇಡಿನ ಸಂಗತಿ' ಎಂದಿದ್ದರು.

'ಮುಂಬೈಗೆ ದಯಮಾಡಿ ಬರಬಾರದೆಂದು ನಾವು ಅವರನ್ನು ವಿನಂತಿಸುತ್ತೇವೆ. ಇದು ಮುಂಬೈ ಪೊಲೀಸರಿಗೆ ಮಾಡಿದ ಅವಮಾನವಲ್ಲದೇ ಮತ್ತೇನಲ್ಲ. ಗೃಹ ಸಚಿವಾಲಯ ಈ ಬಗ್ಗೆ ಕ್ರಮ ಕೈಗೊಳ್ಳಬೇಕು' ಎಂದು ಅವರು ಸಾಮ್ನಾದಲ್ಲಿ ಬರೆದಿದ್ದರು. 

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರ ಕಾರ್ಯವೈಖರಿಯ ಬಗ್ಗೆ ಕಂಗನಾ ಹಲವು ಪ್ರಶ್ನೆಗಳನ್ನು ಈ ಹಿಂದೆ ಎತ್ತಿದ್ದರು.

ಕಂಗನಾ ನೀಡಿರುವ ಮುಂಬೈ ಬಗೆಗಿನ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ. ಕಂಗನಾ ಅವರ ಹೇಳಿಕೆಗೆ ಕೆಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇನ್ನು ಕೆಲವರು ಶಿವಸೇನೆ ನಾಯಕ ಸಂಜಯ್‌ ರಾವತ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಕಂಗನಾ ಹೇಳಿಕೆಗೆ ಟ್ವಿಟರ್‌ನಲ್ಲಿ ಪ್ರಕಟವಾದ ಪ್ರತಿಕ್ರಿಯೆಗಳು ಇಲ್ಲಿವೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು