ಉದಯಪುರ: 10 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ

ಉದಯಪುರ/ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರ 10 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಯಿತು.
ಹಾಗಿದ್ದರೂ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: ಮಾತನಾಡುವ ರಾಷ್ಟ್ರಪತಿಯ ಅಗತ್ಯವಿದೆ, ರಬ್ಬರ್ ಸ್ಟಾಂಪ್ ಅಲ್ಲ: ಯಶವಂತ ಸಿನ್ಹಾ
ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಮಂಗಳವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದರು. ಇದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ಘಟಿಸಿತ್ತು.
ಈ ಹಿನ್ನೆಲೆಯಲ್ಲಿ ಉದಯಪುರದ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಉದಯಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರದೇಶದಲ್ಲಿ ಶಾಂತಿ ನೆಲೆಗೊಂಡಿದ್ದು, ಕರ್ಫ್ಯೂ ಹೇರಿಕೆ ತೆರವುಗೊಳಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.