ಶನಿವಾರ, ಡಿಸೆಂಬರ್ 5, 2020
19 °C

ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

‘ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ರಾಜ್ಯಗಳು ರಚನೆಯಾದ ದಿನ ಪ್ರಯುಕ್ತ ಕರ್ನಾಟಕ ಮಾತ್ರವಲ್ಲದೆ, ಕೇರಳ, ಮಧ್ಯಪ್ರದೇಶ, ಛತ್ತೀಸಗಡ ಹಾಗೂ ಇತರ ರಾಜ್ಯಗಳ ಜನತೆಗೂ ಪ್ರಧಾನಿ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: 

‘ಆಂಧ್ರಪ್ರದೇಶವು ಕಠಿಣ ಪರಿಶ್ರಮ ಮತ್ತು ಸಹಾನುಭೂತಿಗೆ ಪರ್ಯಾಯವಾಗಿದೆ. ಆಂಧ್ರಪ್ರದೇಶದ ಜನರು ಹಲವಾರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಆಂಧ್ರಪ್ರದೇಶ ರಚನೆಯಾದ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಶುಭಾಶಯಗಳು. ರಾಜ್ಯದ ಅಭಿವೃದ್ಧಿಗಾಗಿ ಹಾರೈಕೆಗಳು’ ಎಂದೂ ಮೋದಿ ಟ್ವೀಟ್ ಮಾಡಿದ್ದಾರೆ.

ಭಾರತದ ಇತಿಹಾಸದಲ್ಲಿ ಮಹತ್ವದ ಸ್ಥಾನ ‍ಪಡೆದಿರುವ ಹರಿಯಾಣದ ಜನತೆಗೆ ರಾಜ್ಯ ರಚನೆಯಾದ ದಿನದ ಹೃತ್ಪೂರ್ವಕ ಅಭಿನಂದನೆಗಳು. ಸಮೃದ್ಧಿ ಮತ್ತು ಪ್ರಗತಿಯ ಈ ಸಂಕೇತವು ಪ್ರಗತಿಯ ಹೊಸ ದಾಖಲೆಗಳನ್ನು ಮುಂದುವರಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು