ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಪುರ ರಸ್ತೆ ಅಪಘಾತ; ಪ್ರಧಾನಿ ಮೋದಿ ಸಂತಾಪ, ತಲಾ ₹2 ಲಕ್ಷ ಘೋಷಣೆ

Last Updated 9 ಜೂನ್ 2021, 1:06 IST
ಅಕ್ಷರ ಗಾತ್ರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನಿಧಿ ಘೋಷಿಸಿದ್ದಾರೆ.

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್‌ನಲ್ಲಿದ್ದ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ ₹50,000 ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ) ತಿಳಿಸಿದೆ.

ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ.

ವೇಗವಾಗಿ ಬರುತ್ತಿದ್ದ ಬಸ್, ಟೆಂಪೊ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯ ಇನ್ನೊಂದು ಬದಿಗೆ ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT