ಗುರುವಾರ , ಡಿಸೆಂಬರ್ 1, 2022
22 °C

ಟ್ರ್ಯಾಕ್ಟರ್ ಅಪಘಾತ: ಠಾಣಾಧಿಕಾರಿ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

ಕಾನ್ಪುರ(ಉತ್ತರ ಪ್ರದೇಶ): ಇಲ್ಲಿನ ಭದೆಯುನ ಗ್ರಾಮದ ಬಳಿ ಟ್ರ್ಯಾಕ್ಟರ್‌ ಟ್ರಾಲಿಯೊಂದು ಶನಿವಾರ ಕೆರೆಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಒಂದು ಕಿ.ಮೀ ದೂರದಲ್ಲಿರುವ ಸಾಧ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಒಂದು ಗಂಟೆಯ ಬಳಿಕ ಸ್ಥಳಕ್ಕೆ ತಲುಪಿದ್ದಾರೆ ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ಚಂದ್ರಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಟ್ರ್ಯಾಕ್ಟರ್‌ ಪ್ರಯಾಣಿಕರು ಬಳಿಕ ಘಟಂಪುರ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು