ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಅಪಘಾತ, 26 ಮಂದಿ ಮೃತ: ಠಾಣಾಧಿಕಾರಿ ಅಮಾನತು

Last Updated 2 ಅಕ್ಟೋಬರ್ 2022, 21:26 IST
ಅಕ್ಷರ ಗಾತ್ರ

ಕಾನ್ಪುರ(ಉತ್ತರ ಪ್ರದೇಶ): ಇಲ್ಲಿನ ಭದೆಯುನ ಗ್ರಾಮದ ಬಳಿ ಟ್ರ್ಯಾಕ್ಟರ್‌ ಟ್ರಾಲಿಯೊಂದು ಶನಿವಾರ ಕೆರೆಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಒಂದು ಕಿ.ಮೀ ದೂರದಲ್ಲಿರುವ ಸಾಧ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಒಂದು ಗಂಟೆಯ ಬಳಿಕ ಸ್ಥಳಕ್ಕೆ ತಲುಪಿದ್ದಾರೆ ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ. ಟ್ರ್ಯಾಕ್ಟರ್‌ ಚಾಲಕ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿದ್ದಾರೆ.

ಚಂದ್ರಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಟ್ರ್ಯಾಕ್ಟರ್‌ ಪ್ರಯಾಣಿಕರು ಬಳಿಕ ಘಟಂಪುರ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

‘ಹದಗೆಟ್ಟ ರಸ್ತೆಗಳಿಂದ ಅಪಘಾತ’:ರಾಜ್ಯದ ಹದಗೆಟ್ಟಿರುವ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಟ್ರ್ಯಾಕ್ಟರ್‌ ಅಪಘಾತವನ್ನು ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿಯ ವಿರುದ್ಧ ಹರಿಹಾಯ್ದ ಅವರು, ‘ಬಿಜೆಪಿ ಆಡಳಿತದಲ್ಲಿ ಅಪಘಾತದಲ್ಲಿ ಗಾಯಗೊಂಡವರಿಗೆ ಆಂಬುಲೆನ್ಸ್‌ ಕೂಡ ಸಿಗದ ಸ್ಥಿತಿ ನಿರ್ಮಾಣವಾಗಿದೆ. ಕಾನ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT