ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ಷಿಕ ಕನ್ವರ್‌ ಯಾತ್ರೆ ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಅಕ್ಷರ ಗಾತ್ರ

ಲಖನೌ: ಕೋವಿಡ್‌ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಈ ಬಾರಿಯ ಕನ್ವರ್‌ ಯಾತ್ರೆಯನ್ನು ರದ್ದು ಮಾಡಿದೆ.

ಈ ಬಗ್ಗೆ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಅವರು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕನ್ವರ್‌ ಯಾತ್ರೆಯನ್ನು ನಿಲ್ಲಿಸುವಂತೆ ಕನ್ವರ್‌ ಸಂಘಗಳಿಗೆ ಉತ್ತರ ಪ್ರದೇಶ ಸರ್ಕಾರವು ಮನವಿ ಮಾಡಿತ್ತು. ಅದರಂತೆ ಸಂಘಗಳು ಯಾತ್ರೆ ರದ್ದು ಮಾಡಿವೆ.

ಕನ್ವರ್‌ ಯಾತ್ರೆಗೆ ಉತ್ತರ ಪ್ರದೇಶ ಸರ್ಕಾರವು ಈ ಮೊದಲು ಅನುಮತಿ ನೀಡಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.

‘ಧಾರ್ಮಿಕ ಆಚರಣೆಗಳಿಗಿಂತಲೂ ದೇಶದ ನಾಗರಿಕರ ಬದುಕುವ ಹಕ್ಕು ಮುಖ್ಯ. ಹಾಗಾಗಿ, ಕನ್ವರ್‌ ಯಾತ್ರೆಗೆ ಅನುಮತಿ ನೀಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು,‘ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿತ್ತು. ಅದರಂತೆ ಉತ್ತರ ಪ್ರದೇಶ ಸರ್ಕಾರವು ಯಾತ್ರೆ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕನ್ವರ್‌ ಸಂಘಗಳಿಗೆ ಮನವಿ ಮಾಡಿತ್ತು.

ಶಿವಭಕ್ತರು, ಗಂಗಾನದಿಯ ವಿವಿಧ ಸ್ನಾನಘಟ್ಟಗಳಲ್ಲಿ ಪವಿತ್ರ ಸ್ನಾನ ಈ ಕನ್ವರ್‌ ಯಾತ್ರೆ ಜುಲೈ 25ರಿಂದ ಆಗಸ್ಟ್‌ 6ರವರೆಗೆ ನಡೆಯಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT