ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷದ ಮತ್ತು ಇತರ ಪ್ರತಿಪಕ್ಷಗಳ ನಾಯಕರಿಗೆ ಸೋಮವಾರ ಖಾಸಗಿಯಾಗಿ ಔತಣಕೂಟ ಆಯೋಜಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಕ್ಷದ ನಾಯಕತ್ವ ಮತ್ತು ಸಂಘಟನೆಯಲ್ಲಿ ಸುಧಾರಣೆಯಾಗಬೇಕೆಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ 23 ನಾಯಕರಲ್ಲಿ ಸಿಬಲ್ ಕೂಡ ಪ್ರಮುಖರಾಗಿದ್ದರು. ಹೀಗಾಗಿ ಅವರ ಖಾಸಗಿ ಔತಣಕೂಟ ವದಂತಿಗಳಿಗೆ ಕಾರಣವಾಗಿದೆ ಎಂದು ‘ಐಎಎನ್ಎಸ್’ ವರದಿ ಮಾಡಿದೆ.

ಓದಿ:ರಾಜ್ಯ ಸರ್ಕಾರದ ಅಧಿಕಾರ ಕಸಿಯುವ ಎನ್ಇಪಿ: ವೈ.ಎಸ್.ವಿ. ದತ್ತ

ಸಿಬಲ್ ಅವರ ಔತಣಕೂಟದಲ್ಲಿ ಎನ್ಸಿಪಿ ವರಿಷ್ಠ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ನ ಡೆರೆಕ್ ಒಬ್ರಿಯಾನ್, ಡಿಎಂಕೆಯ ತಿರುಚಿ ಶಿವ, ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ರಾಮಗೋಪಾಲ್ ಯಾದವ್, ಆರ್ಜೆಡಿ ವರಿಷ್ಠ ಲಾಲು ಪ್ರಸಾದ್, ಕಾಂಗ್ರೆಸ್ ನಾಯಕರಾದ ಮನೀಷ್ ತಿವಾರಿ, ಶಶಿ ತರೂರ್ ಮತ್ತು ಆನಂದ್ ಶರ್ಮಾ ಭಾಗವಹಿಸಿದ್ದರು.

ಕಪಿಲ್ ಸಿಬಲ್ ಔತಣಕೂಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಅವರಿಗೆ 73 ವರ್ಷವಾದ ಹಿನ್ನೆಲೆಯಲ್ಲಿ ಆಪ್ತರನ್ನು ಔತಣಕೂಟಕ್ಕೆ ಕರೆದಿದ್ದರಷ್ಟೆ ಎಂದು ಕೆಲವು ಮೂಲಗಳು ಹೇಳಿವೆ. ಆದರೆ, ಮುಂದಿನ ವರ್ಷ ನಡೆಯಲಿರುವ ನಿರ್ಣಾಯಕ ವಿಧಾನಸಭೆ ಚುನಾವಣೆಗಳಿಗೆ ಪೂರ್ವಭಾವಿಯಾಗಿ ಪ್ರತಿಪಕ್ಷಗಳ ನಾಯಕರ ಭೇಟಿ ಎಂದು ಇನ್ನು ಕೆಲವು ಮೂಲಗಳು ಹೇಳಿವೆ.

ಓದಿ:ಅಮೆರಿಕದಲ್ಲಿ ಡೆಲ್ಟಾ ಪ್ರಸರಣ ತೀವ್ರ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆ

ಪಕ್ಷದ ಆಂತರಿಕ ಕಾರ್ಯಚಟುವಟಿಕೆಗೆ ಸಂಬಂಧಿಸಿದ ಊಹಾಪೋಹಗಳನ್ನು ಔತಣಕೂಟದಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ. ಆದರೆ, 2024ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳ ಒಗ್ಗಟ್ಟು ಬಯಸುವುದಾಗಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.