ಮಂಗಳವಾರ, ಸೆಪ್ಟೆಂಬರ್ 21, 2021
29 °C

ಕಪಿಲಾ ವಾತ್ಸಾಯನ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಲೇಖಕಿ, ಚಿಂತಕಿ, ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ಅವರು ಬುಧವಾರ ಇಲ್ಲಿ ತಮ್ಮ ನಿವಾಸದಲ್ಲಿ ಮೃತರಾದರು. ಅವರಿಗೆ 92 ವರ್ಷವಾಗಿತ್ತು. ಮಧ್ಯಾಹ್ನ ಲೋಧಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸ್ಥಾಪಕ ನಿರ್ದೇಶಕಿ, ಐಐಸಿಯಲ್ಲಿ ಏಷ್ಯಾ ಪ್ರಾಜೆಕ್ಟ್‌ನ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದರು. ‘ದ ಸ್ವೈರ್ ಅಂಡ್ ದ ಸರ್ಕಲ್ ಆಫ್ ಇಂಡಿಯನ್ ಆರ್ಟ್ಸ್’ ಸೇರಿ ಹಲವು ಕೃತಿಗಳನ್ನು ರಚಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು