ಸರ್ಕಾರ ಗಡಿಭಾಗದ ಮರಾಠಿ ಭಾಷಿಕರ ಜೊತೆ ನಿಲ್ಲಲಿದೆ: ಕೋಶಿಯಾರಿ

ಮುಂಬೈ: ‘ರಾಜ್ಯ ಸರ್ಕಾರವು ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದಲ್ಲಿ ನೆಲೆಸಿರುವ ಮರಾಠಿ ಭಾಷಿಕರ ಬೆನ್ನಿಗೆ ನಿಲ್ಲಲಿದೆ’ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಹೇಳಿದ್ದಾರೆ.
ದಾದರ್‌ನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಮೈದಾನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಗಡಿ ಬಿಕ್ಕಟ್ಟು ಶಮನದ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರವು ತನ್ನ ನಿಲುವಿಗೆ ಬದ್ಧವಾಗಿರಲಿದೆ’ ಎಂದಿದ್ದಾರೆ.
‘ಗಡಿ ಭಾಗದ ಮರಾಠಿ ಭಾಷಿಕರ ಜೊತೆ ನಿಲ್ಲುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಬಲ ತುಂಬುವ ನಿಲುವಿಗೂ ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.