ಮಂಗಳವಾರ, ಮಾರ್ಚ್ 21, 2023
25 °C

ಗಡಿ ವಿವಾದ: ವಿಚಾರಣೆಯಿಂದ ನ್ಯಾಯಮೂರ್ತಿ ನಾಗರತ್ನ ಹಿಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೂಡಿರುವ ಮೂಲದಾವೆಯ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಬುಧವಾರ ಹಿಂದೆ ಸರಿದಿದ್ದಾರೆ. 

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌, ಹೃಷಿಕೇಶ ರಾಯ್‌ ಹಾಗೂ ನಾಗರತ್ನ ಅವರಿದ್ದ ಪೀಠವು ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಕರ್ನಾಟಕ ಮೂಲದವರಾದ ನಾಗರತ್ನ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯುವುದಾಗಿ ಪ್ರಕಟಿಸಿದರು. ಗಡಿ ವಿವಾದದ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಅವರು ಹೊಸ ಪೀಠ ಸ್ಥಾಪಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು