ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲ: ₹200 ಕೋಟಿ ವೆಚ್ಚದ ಯಾತ್ರಿಗಳ ಸಂಕೀರ್ಣಕ್ಕೆ ಸಿಎಂ ಯಡಿಯೂರಪ್ಪ ಶಿಲಾನ್ಯಾಸ

ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
Last Updated 24 ಸೆಪ್ಟೆಂಬರ್ 2020, 12:06 IST
ಅಕ್ಷರ ಗಾತ್ರ

ತಿರುಪತಿ: ತಿರುಮಲದ ಸಮೀಪ ಅಂದಾಜು ₹200 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಎರಡು ಬೃಹತ್‌ ‘ಯಾತ್ರಾರ್ಥಿ ಸಂಕೀರ್ಣ’ಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ ರೆಡ್ಡಿ ಉಪಸ್ಥಿತರಿದ್ದರು. ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನೀಡಿರುವ ಯೋಜನೆಯಂತೆ, ಟಿಟಿಡಿ ಈ ಸಂಕೀರ್ಣ ಹಾಗೂ ಮದುವೆ ಸಭಾಂಗಣವನ್ನು ನಿರ್ಮಾಣ ಮಾಡಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದರು. ಸಂಕೀರ್ಣ ನಿರ್ಮಾಣದ ಪೂರ್ಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದರು.

‘ಶಂಕುಸ್ಥಾಪನೆಗೂ ಮುನ್ನ ಯಡಿಯೂರಪ್ಪ ಹಾಗೂ ಜಗನ್‌ಮೋಹನ ರೆಡ್ಡಿದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ವಿಶ್ವವನ್ನು ಕೋವಿಡ್‌–19ನಿಂದ ರಕ್ಷಿಸುವ ಉದ್ದೇಶದಿಂದ ಕಳೆದ ಮೂರು ತಿಂಗಳಿಂದ ನಡೆಸಲಾಗುತ್ತಿರುವ ‘ಸುಂದರಕಾಂಡ ಪಾರಾಯಣ’ದಲ್ಲೂ ಇಬ್ಬರೂ ಮುಖ್ಯಮಂತ್ರಿಗಳು ಭಾಗವಹಿಸಿದರು’ ಎಂದು ಅಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT