ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಯಾತ್ರೆ ತಡೆಯಲು ಇ.ಡಿ. ವಿಚಾರಣೆ’

ರಾಹುಲ್‌ ವಿಚಾರಣೆ: ರಾಜ್ಯದ ಕಾಂಗ್ರೆಸ್‌ ನಾಯಕರಿಂದ ಪ್ರತಿಭಟನೆ
Last Updated 21 ಜೂನ್ 2022, 19:35 IST
ಅಕ್ಷರ ಗಾತ್ರ

ನವದೆಹಲಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್‌ ಜೋಡೋ ಯಾತ್ರೆ (ಭಾರತ ಒಗ್ಗೂಡಿಸಿ ಯಾತ್ರೆ) ನಡೆಸಲು ಪಕ್ಷವು ಸಿದ್ಧತೆ ನಡೆಸಿದ್ದು, ಇದನ್ನು ತಡೆಯಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್‌ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತಿದೆ’ ಎಂದು ಕೆಪಿಸಿಸಿ ಅಧ್ಕಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಎಐಸಿಸಿ ಕಚೇರಿ ಬಳಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ರಾಹುಲ್ ಗಾಂಧಿ ಅವರನ್ನು 40 ತಾಸು ವಿಚಾರಣೆ ಮಾಡುವ ಅಗತ್ಯ ಏನಿದೆ. ಇದರಲ್ಲಿ ಷಡ್ಯಂತ್ರವಿದೆ. ಇದರಿಂದ ಒಳ್ಳೆಯದಾಗುವುದಿಲ್ಲ. ನಮ್ಮ ನಾಯಕರು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದಾರೆ’ ಎಂದು ಅವರು ಹೇಳಿದರು.

‘ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಮುಗಿದ ಅಧ್ಯಾಯ. ಹೀಗಾಗಿ ಈಗ ವಿಚಾರಣೆಗೆ ಕರೆದಿರುವುದೇ ತಪ್ಪು. ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣದ ವಿಚಾರಣೆ ಮಾತ್ರ ಯಾಕೆ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಅಕ್ರಮಗಳನ್ನು ಎಸಗಿಲ್ಲವೇ. ಅವರ ಪ್ರಕರಣಗಳ ವಿಚಾರಣೆಯನ್ನು ಯಾಕೆ ಮಾಡುತ್ತಿಲ್ಲ’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಎಲ್. ಹನುಮಂತಯ್ಯ, ಮುಖಂಡರಾದ ನಾಗರಾಜ ಛಬ್ಬಿ, ವಿನಯ್ ಕಾರ್ತಿಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬುಧವಾರವೂ ಪ್ರತಿಭಟನೆ: ನವದೆಹಲಿ ಯಲ್ಲಿ ಬುಧವಾರ ನಡೆಯುವ ಪ್ರತಿ ಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟ ಕದ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರಿಗೆ ಎಐಸಿಸಿ ಸೂಚನೆ ನೀಡಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಸೇರಿದಂತೆ ಹಲವು ಶಾಸಕರು ಮಂಗಳವಾರವೇ ದೆಹಲಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT