ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದ ಕಾಂಗ್ರೆಸ್‌ ನಾಯಕರು ವಶಕ್ಕೆ

Last Updated 14 ಜೂನ್ 2022, 7:10 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಲು ಹೊರಟ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ತಮಿಳುನಾಡಿನ ಸಂಸದರನ್ನು ದೆಹಲಿಯ ನರೇಲಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದರು.ಈ ವೇಳೆ ವಾಗ್ವಾದ ನಡೆಯಿತು ಹಾಗೂಪೊಲೀಸರ ಧೋರಣೆಯನ್ನು ಸುರೇಶ್ ಪ್ರಶ್ನಿಸಿದರು. ಪೊಲೀಸರೊಬ್ಬರು ಸುರೇಶ್ ಅವರನ್ನು ಹಿಂಬದಿಯಿಂದ ತಳ್ಳಿದರು. ಬಳಿಕ ಬಸ್ಸಿನಲ್ಲಿ ಕರೆದುಕೊಂಡು ಹೋದರು.

'ನಾವು ಕಾಂಗ್ರೆಸ್ ಕಚೇರಿಗೆ ಹೊರಟಿದ್ದೆವು. ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸರು ನಮ್ಮನ್ನು ಅಪಹರಣ ಮಾಡಿದ್ದಾರೆ' ಎಂದು ಸುರೇಶ್ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT