ಕೆಂಪು ಈರುಳ್ಳಿ ರಫ್ತಿಗೆ ಅವಕಾಶ ನೀಡಲು ಒತ್ತಾಯ

ನವದೆಹಲಿ: ‘ಬೆಂಗಳೂರು ಗುಲಾಬಿ ಈರುಳ್ಳಿ’ಗೆ ರಫ್ತು ನಿಷೇಧದಿಂದ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕರ್ನಾಟಕ ರೈತರು ಒತ್ತಾಯಿಸಿದ್ದಾರೆ.
ಕೋಲಾರ ಬಿಜೆಪಿ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ನೇತೃತ್ವದ ರೈತ ನಿಯೋಗ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿ, ಈ ವಿಷಯವನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವಂತೆ ಮನವಿ ಮಾಡಿದೆ.
‘ದೇಶೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಗೆ ಬೇಡಿಕೆಯಿಲ್ಲದೇ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ವರ್ಷ 10,000 ಟನ್ಗಿಂತಲೂ ಹೆಚ್ಚು ಈರುಳ್ಳಿ ಬೆಳೆದಿದ್ದಾರೆ. ಈರುಳ್ಳಿ ಬೆಳೆ ನಾಶವಾಗುವುದನ್ನು ತಡೆಯಲು ರಫ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ನಿಯೋಗ ತಿಳಿಸಿದೆ.
ರೈತರ ಸಮಸ್ಯೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಗಮನಕ್ಕೆ ತರುವುದಾಗಿ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.