ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ: ರಾಜೀವ್‌ ಚಂದ್ರಶೇಖರ್

Last Updated 27 ಮಾರ್ಚ್ 2023, 6:14 IST
ಅಕ್ಷರ ಗಾತ್ರ

ಬೆಂಗಳೂರು: 2023–24ನೇ ಸಾಲಿನ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಮೂರು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರಗಳ (AI centre of excellence) ಪೈಕಿ ಒಂದು ಕೇಂದ್ರ ಕರ್ನಾಟಕಕ್ಕೆ ಲಭಿಸಲಿದೆ ಎಂದು ವರದಿಯಾಗಿದೆ.

2023-24ನೇ ಬಜೆಟ್‌ನಲ್ಲಿ ದೇಶದ ಮೂರು ಕಡೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಈ ಕೇಂದ್ರಗಳು ಉದ್ಯಮಿಗಳಿಗೆ ಸಂಶೋಧನೆ ಹಾಗೂ ಅಧ್ಯಯನ ನಡೆಸಲು ಹಾಗೂ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ನೆರವು ನೀಡಲಿದೆ.

‘ಕರ್ನಾಟಕವು ಒಂದು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರವನ್ನು ನಿರೀಕ್ಷಿಸಬಹುದು, ಈಗಾಗಲೇ ರಾಜ್ಯ ಸರ್ಕಾರವು ಈಗಾಗಲೇ ಅದಕ್ಕೆ ಅರ್ಜಿ ಸಲ್ಲಿಸಿದ್ದು, ನಾನು ಈ ಬಗ್ಗೆ ಒಲವು ತೋರಿಸಿದ್ದೇನೆ‘ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಹಾಗೂ ಐಟಿ ಖಾತೆಯ ರಾಜ್ಯ ಸಚಿವರಾದ ರಾಜೀವ್‌ ಚಂದ್ರಶೇಖರ್‌ ಅವರು ಡೆಕ್ಕರ್‌ ಹೆರಾಲ್ಡ್‌ಗೆ ಹೇಳಿದ್ದಾರೆ.

ಅಲ್ಲದೇ ಡಬಲ್‌ ಎಂಜಿನ್‌ ಫ್ಯಾಕ್ಟರ್‌ ಕರ್ನಾಟಕಕ್ಕೆ ಲಾಭ ತಂದುಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರವಷ್ಟೇ ಧಾರವಾಡದಲ್ಲಿ ಎಲೆಕ್ಟ್ರಾನಿಕ್ಸ್‌ ಉತ್ಪಾದನಾ ಕ್ಲಸ್ಟರ್‌ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT