ಶನಿವಾರ, ಅಕ್ಟೋಬರ್ 31, 2020
19 °C

ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. ಫೂನಂ ಮಹಾಜನ್‌ ಅವರು ಯುವ ಮೋರ್ಚಾ ಅಧ್ಯಕ್ಷರಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಶನಿವಾರ ಹೊಸ ತಂಡವನ್ನು ಪ್ರಕಟಿಸಿದ್ದಾರೆ. ಸಚಿವ ಸಿ.ಟಿ.ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿಯಾಗಿ ನೇಮಿಸಲಾಗಿದೆ.

ಸಂಸದ ತೇಜಸ್ವಿ ಸೂರ್ಯ ಅವರಿಗೆ ಪಕ್ಷದ ಯುವ ಘಟಕದ ಹೊಣೆ ನೀಡಲಾಗಿದೆ. ಇನ್ನೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ. ಅವರ ಸ್ಥಾನಗಳಿಗೆ ಸಿ.ಟಿ.ರವಿ, ಭೂಪೇಂದ್ರ ಯಾದವ್‌, ಕೈಲಾಶ್‌ ವಿಜಯ್‌ವರ್ಗೀಯ್ ಸೇರಿದಂತೆ ಹೊಸ ಮುಖಂಡರನ್ನು ಆಯ್ಕೆ ಮಾಡಲಾಗಿದೆ.

ಡಾ.ರಮಣ್‌ ಸಿಂಗ್‌, ವಸುಂಧರಾ ರಾಜೇ, ಮುಕುಲ್‌ ರಾಯ್‌, ಅನ್ನಪೂರ್ಣಾ ದೇವಿ, ಬೈಜ್ಯಂತ್ ಜಯ ಪಾಂಡಾ ರಾಷ್ಟ್ರೀಯ ಉಪಾಧ್ಯಕ್ಷರ ಸಾಲಿನಲ್ಲಿದ್ದಾರೆ.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದೆ. ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ ಹಾಗೂ ಮೀಡಿಯಾ ನಿರ್ವಹಣೆ ಹೊಣೆ ಅವರಿಗೇ ಮುಂದುವರಿದಿದೆ. ರಾಜ್ಯದ ಸಂಸದ ರಾಜೀವ್‌ ಚಂದ್ರಶೇಖರ್‌ ಅವರು 23 ಮಂದಿ ವಕ್ತಾರರ ಪಟ್ಟಿಯಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು