ಶುಕ್ರವಾರ, ಮೇ 20, 2022
26 °C

Covid Karnataka Update| ರಾಜ್ಯದಲ್ಲಿ ಇಂದು 41,400 ಪ್ರಕರಣ ಪತ್ತೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 41,400 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,50,742ಕ್ಕೆ ಏರಿಕೆಯಾಗಿವೆ. ‌

ಬೆಂಗಳೂರಿನಲ್ಲಿ 19,105 ಪ್ರಕರಣಗಳು ದೃಢವಾಗಿವೆ.

ಇಂದು ಪತ್ತೆಯಾದ ಹೊಸ ಪ್ರಕರಣಗಳಿಗಿಂತಲೂ, ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಹೆಚ್ಚಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಇಂದು 53,093 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 52 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ 19 ಮಂದಿ ಮೃತಪಟ್ಟಿದ್ದಾರೆ.

ಮಂಗಳವಾರ 1,55,054 ಪರೀಕ್ಷೆಗಳು ನಡೆದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಸದ್ಯ ರಾಜ್ಯದ ಪಾಸಿಟಿವಿಟಿ ದರ ಶೇ 26.70 ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು