ಕರ್ತಾರ್‌ಪುರ ಕಾರಿಡಾರ್ ಸಾರ್ವಜನಿಕರಿಗೆ ಮುಕ್ತ

ಡೇರಾ ಬಾಬಾ ನಾನಕ್ (ಪಂಜಾಬ್): ಕೋವಿಡ್–19ನಿಂದಾಗಿ ಮುಚ್ಚಲಾಗಿದ್ದ ಕರ್ತಾರ್‌ಪುರ ಕಾರಿಡಾರ್ ಅನ್ನು 20 ತಿಂಗಳ ಬಳಿಕ ಬುಧವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು. 28 ಸಿಖ್ ಯಾತ್ರಿಕರನ್ನು ಒಳಗೊಂಡ ಮೊದಲ ತಂಡವು ಕರ್ತಾರ್‌ಪುರ ಕಾರಿಡಾರ್ ಮೂಲಕ ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್ ಸಾಹಿಬ್‌ಗೆ ತೆರಳಿದರು.
ಕರ್ತಾರ್‌ಪುರ ಕಾರಿಡಾರ್ ಅನ್ನು ಬುಧವಾರದಿಂದ ತೆರೆಯುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ತಿಳಿಸಿದ್ದರು. ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ತಾರ್‌ಪುರ ಕಾರಿಡಾರ್ ಮುಚ್ಚಲಾಗಿತ್ತು.
‘ಯಾತ್ರಾರ್ಥಿಗಳು ಕಡ್ಡಾಯವಾಗಿ ಆರ್ಟಿ–ಪಿಸಿಆರ್ ವರದಿ ಮತ್ತು ಎರಡೂ ಡೋಸ್‌ಗಳನ್ನು ಪಡೆದಿರುವ ಪ್ರಮಾಣಪತ್ರವನ್ನು ಸಲ್ಲಿಸಬೇಕು’ ಎಂದು ಅಧಿಕಾರಿಗಳು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.