ಶುಕ್ರವಾರ, ಅಕ್ಟೋಬರ್ 30, 2020
23 °C
ಕಾಶ್ಮೀರ: ಮೂವರು ಶಂಕಿತ ಉಗ್ರರ ಬಂಧನ

ಡ್ರೋನ್‌ ಮೂಲಕ ಶಸ್ತ್ರಾಸ್ತ್ರ, ಹಣ ಸಾಗಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು : ಭಾರತದೊಳಗೆ ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಹಣ ಸಾಗಿಸಲು ಪಾಕಿಸ್ತಾನವು ಡ್ರೋನ್‌ ಬಳಸುತ್ತಿರುವ ವಿಷಯ ಶನಿವಾರ ಬೆಳಕಿಗೆ ಬಂದಿದೆ. 

ಪಾಕಿಸ್ತಾನ ಡ್ರೋನ್ ಮೂಲಕ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ನಿಯಂತ್ರಣ ರೇಖೆ ಬಳಿ ‌ಭಾರತದ ಕರೆನ್ಸಿ ಮತ್ತು ಶಸ್ತ್ರಾಸ್ತ್ರ ಇಳಿಸಿತ್ತು. ಅವನ್ನು ಸಂಗ್ರಹಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. 

ಮೂವರು ಶಂಕಿತ ಉಗ್ರರು 19–25 ವರ್ಷದೊಳಗಿನವರಾಗಿದ್ದು ಲಷ್ಕರ್‌ ಎ ತಯಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದವರು. ಬಂಧಿತರಿಂದ ಅಪಾರ ಪ್ರಮಾಣದ ಮದ್ದು, ಗುಂಡು, ಶಸ್ತ್ರಾಸ್ತ್ರ ಮತ್ತು ಭಾರತದ ಕರೆನ್ಸಿ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.