ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ನಂಟು: ಕಾಶ್ಮೀರ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಸೇರಿ ಮೂವರ ವಜಾ

Last Updated 13 ಮೇ 2022, 15:46 IST
ಅಕ್ಷರ ಗಾತ್ರ

ಶ್ರೀನಗರ: ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಕಾಶ್ಮೀರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಸೇರಿ ಮೂವರು ಸರ್ಕಾರಿ ನೌಕರರನ್ನು ಶುಕ್ರವಾರ ಜಮ್ಮು–ಕಾಶ್ಮೀರ ಆಡಳಿತವು ವಜಾಗೊಳಿಸಿದೆ.

ಕಾಶ್ಮೀರ ವಿಶ್ವವಿದ್ಯಾಲಯದ ರಾಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಅಲ್ತಾಫ್‌ ಹುಸೇನ್‌, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ಮೊಹಮ್ಮದ್‌ ಮಕ್ಬೂಲ್‌ ಹಜಂ, ಜಮ್ಮು–ಕಾಶ್ಮೀರ ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್‌ ಗುಲಾಂ ರಸೂಲ್‌ ವಜಾಗೊಂಡವರು.

ಸಂವಿಧಾನದ 311 (2) (ಸಿ) ಅಡಿ ರಚಿಸಲಾದ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ನಿಯಮದ ಅನ್ವಯ ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ವಿಚಾರಣೆಯಿಲ್ಲದೆ ಸೇವೆಯಿಂದ ವಜಾ ಮಾಡಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT