ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಕೊಂದ ಭಯೋತ್ಪಾದಕರು

ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್‌ ಜಿಲ್ಲೆಯ ಕಂದಾಯ ಇಲಾಖೆಯ ಉದ್ಯೋಗಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಅವರು ಶ್ರೀನಗರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕಾಶ್ಮೀರದ ಚದೂರ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಹುಲ್ ಭಟ್ ಎಂದು ಗುರುತಿಸಲಾಗಿದ್ದು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಈ ಕುರಿತಂತೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದು, ‘ಬುಡ್ಗಾಮ್‌ನ ಚದೂರ ತಹಸೀಲ್ದಾರ್ ಕಚೇರಿಯ ಉದ್ಯೋಗಿ ಶ್ರೀ ರಾಹುಲ್ ಭಟ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ತಿಳಿಸಿದೆ.

ಘಟನೆ ಬಳಿಕ ಭದ್ರತಾ ಪಡೆ ಚದೂರ ಪ್ರದೇಶದಲ್ಲಿ ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಶ್ವನಿ ಹಂಡ, ಸರ್ಕಾರ ಕಾಶ್ಮೀರಿ ಪಂಡಿತರಿಗೆ ಕಣಿವೆಯಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT