ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಭೆಗೆ ತೆಲಂಗಾಣ ಸಿಎಂ ಗೈರು ನಿರ್ಧಾರ: ನೀತಿ ಆಯೋಗದ ಪ್ರತಿಕ್ರಿಯೆ ಹೀಗಿದೆ

Last Updated 6 ಆಗಸ್ಟ್ 2022, 14:22 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಆ.7ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಗೈರಾಗಲು ನಿರ್ಧರಿಸಿದ್ದಾರೆ.

ಕೆಸಿಆರ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ನೀತಿ ಆಯೋಗ, ‘ತೆಲಂಗಾಣ ಸಿ.ಎಂ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದು ದುರದೃಷ್ಟಕರ. ಅಭಿವೃದ್ಧಿ ಸಂಬಂಧಿತ ವಿಷಯಗಳ ಬಗ್ಗೆ ಸೂಕ್ತವಾದ ಪರಿಹಾರಗಳನ್ನು ಕಂಡುಕೊಳ್ಳಲು ಆಡಳಿತ ಮಂಡಳಿ ಉತ್ತಮ ವೇದಿಕೆಯಾಗಿದೆ’ ಎಂದಿದೆ.

‘ರಾಜ್ಯಗಳೊಂದಿಗೆ ನಿಕಟವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ವರ್ಷ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ 30ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ. ಕಳೆದ ವರ್ಷ ಹೈದರಾಬಾದ್‌ನಲ್ಲಿ ತೆಲಂಗಾಣ ಸಿ.ಎಂ ಕೆಸಿಆರ್‌ ಅವರನ್ನು ನೀತಿ ಆಯೋಗದ ನಿಯೋಗವೂ ಭೇಟಿ ಮಾಡಿತ್ತು. ಇತ್ತೀಚೆಗೆ ಆಡಳಿತ ಮಂಡಳಿ ಸಭೆಗಳಿಗೆ ಆಹ್ವಾನಿಸಿದರೂ ಕೆಸಿಆರ್‌ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ’ ಎಂದು ನೀತಿ ಆಯೋಗ ಹೇಳಿಕೊಂಡಿದೆ.

ಕಳೆದ 4 ವರ್ಷಗಳಲ್ಲಿ ತೆಲಂಗಾಣಕ್ಕಾಗಿ ಜಲ ಜೀವನ್ ಮಿಷನ್ ಅಡಿಯಲ್ಲಿ ₹3,982 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ನೀತಿ ಆಯೋಗ ಮಾಹಿತಿ ನೀಡಿದೆ.

ಪ್ರಧಾನಿ ಮೋದಿಗೆಪತ್ರ ಬರೆದಿರುವ ಕೆಸಿಆರ್‌, ‘ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಿಲ್ಲ. ಇದು ಕೇಂದ್ರದ ವಿರುದ್ಧದ ಪ್ರತಿಭಟನೆಯ ಸಂಕೇತವಾಗಿದೆ’ ಎಂದು ತಿಳಿಸಿದ್ದಾರೆ.

‘ಜನರ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಿದೆ. ಆದರೆ, ಈ ಯೋಜನೆಗಳಿಗೆ ಕೇಂದ್ರವು ಸಹಕರಿಸುತ್ತಿಲ್ಲ’ ಎಂದು ರಾವ್‌ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT