ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಡೆಹ್ರಾಡೂನ್: ಭಾರಿ ಮಳೆ ಮತ್ತು ಹಿಮಪಾತದ ಕಾರಣ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸೋಮವಾರ ಯಾತ್ರೆ ಕೈಗೊಂಡಿದ್ದ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ಮಧ್ಯೆ ವಿವಿಧೆಡೆ ಶಿಬಿರಗಳಲ್ಲಿ ತಂಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನ ತಿಳಿಯಾಗುವವರೆಗೂ ದೇಗುಲದತ್ತ ಸಂಚರಿಸದೆ ಶಿಬಿರಗಳಲ್ಲಿಯೇ ತಂಗುವಂತೆ ಭಕ್ತರಿಗೆ ರುದ್ರಪ್ರಯಾಗ ಜಿಲ್ಲಾಡಳಿತ ಸೂಚನೆ ನೀಡಿದೆ. 2013ರಲ್ಲಿ ಕೇದಾರನಾಥದಲ್ಲಿ ಸಂಭವಿಸಿದ್ದ ಭೀಕರ ದುರಂತವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
‘ಉತ್ತರ‘ದಲ್ಲಿ ಮಳೆ ಅಬ್ಬರ: ಲಕ್ಷಾಂತರ ಜನರಿಗೆ ಸಂಕಷ್ಟ; 80 ಸಾವು
ಸೋಮವಾರ ದರ್ಶನ ಪಡೆದ ಭಕ್ತರನ್ನು ಕೇದಾರನಾಥದಲ್ಲೇ ಉಳಿಸಿಕೊಳ್ಳಲಾಗಿದೆ. ಗೌರಿಕುಂಡದಿಂದ ಪ್ರಯಾಣ ಆರಂಭಿಸಬೇಕಿದ್ದವರನ್ನೂ ಅಲ್ಲಿಯೇ ಇರುವಂತೆ ತಿಳಿಸಲಾಗಿದೆ. ಹಿಂದೆ ನಡೆದಿದ್ದ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.