ಶುಕ್ರವಾರ, ಸೆಪ್ಟೆಂಬರ್ 30, 2022
24 °C

ಸಂವಿಧಾನ ರಕ್ಷಣೆಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ: ಯೆಚೂರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ‘ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು ಭಾನುವಾರ ಇಲ್ಲಿ ಹೇಳಿದ್ದಾರೆ.

‘ಹೈದರಾಬಾದ್‌ ವಿಮೋಚನೆ ಹೋರಾಟದಲ್ಲಿ ಬೆಜೆಪಿಗೆ ಯಾವುದೇ ಪಾತ್ರವಿಲ್ಲ. ಬಿಜೆಪಿಯವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

‘ನೀವು ಭಾರತವನ್ನು ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಉಳಿಸಬೇಕೆಂದು ಬಯಸಿದರೆ, ಅಧಿಕೃತ ಸಂಸ್ಥೆಗಳನ್ನು ಆಡಳಿತಾರೂಢ ಪಕ್ಷವು ದುರ್ಬಳಕೆ ಮಾಡಬಾರದು ಎಂದಿದ್ದರೆ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು’ ಎಂದೂ ಹೇಳಿದ್ದಾರೆ.

‘ಬಿಜೆಪಿಯು ತೆಲಂಗಾಣದಲ್ಲಿ ಅಧಿಕಾರಕ್ಕೆ ಬರಲು ಬಯಸುತ್ತಿದೆ. ಇದಕ್ಕಾಗಿ ಇತಿಹಾಸವನ್ನು ತಿರುಚಿ, ಕೋಮುವಾದವನ್ನು ಪ್ರೋತ್ಸಾಹಿಸುತ್ತಿದೆ’ ಎಂದೂ ಯೆಚೂರಿ ಅವರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು