ಭಾನುವಾರ, ಅಕ್ಟೋಬರ್ 24, 2021
23 °C

ಪಂಜಾಬ್ ಅನ್ನು ಸುರಕ್ಷಿತವಾಗಿರಿಸಿ: ನೂತನ ಮುಖ್ಯಮಂತ್ರಿಗೆ ಅಮರಿಂದರ್ ಸಿಂಗ್ ಸಲಹೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರಿಗೆ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಶುಭ ಹಾರೈಸಿದ್ದಾರೆ.

ಅಮರಿಂದರ್ ಸಿಂಗ್‌ರ ಸಂದೇಶವನ್ನು ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಲ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

'ಚರಣ್‌ಜಿತ್‌ ಸಿಂಗ್‌ ಚನ್ನಿಗೆ ನನ್ನ ಶುಭ ಹಾರೈಕೆಗಳು. ಚನ್ನಿ ಅವರು ಗಡಿ ರಾಜ್ಯವಾದ ಪಂಜಾಬ್ ಅನ್ನು ಸುರಕ್ಷಿತವಾಗಿಡುತ್ತಾರೆ ಎಂಬ ಭರವಸೆ ನನಗಿದೆ. ಗಡಿಯುದ್ದಕ್ಕೂ ಹೆಚ್ಚುತ್ತಿರುವ ಆತಂಕದಿಂದ ನಮ್ಮ ಜನರನ್ನು ರಕ್ಷಿಸಲು ಅವರಿಗೆ ಸಾಧ್ಯವಿದೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ... 

ಚಮಕೌರ್‌ ಸಾಹಿಬ್‌ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್‌ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮಾರ್ಚ್‌ 2017ರಲ್ಲಿ ಸಿಎಂ ಅಮರಿಂದರ್‌ ಸಿಂಗ್‌ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದರು.

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು