ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಭ್ರಷ್ಟಾಚಾರಗಳ ಎಲ್ಲ ದಾಖಲೆಗಳನ್ನು ಮುರಿಯುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
ಬಿಜೆಪಿ ವಿರುದ್ಧ ಸೋಮವಾರ ಗಂಭೀರ ಆರೋಪ ಮಾಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿ ಪಕ್ಷಕ್ಕೆ ಸೇರಿದರೆ ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಅಬಕಾರಿ ನೀತಿ ಸಮಿತಿಯ ಶಿಫಾರಸಿಗೂ ಮತ್ತು ದೆಹಲಿ ಜಾರಿಗೊಳಿಸಿರುವ ಅಬಕಾರಿ ನೀತಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೌನವು ಅವರು ಅಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.
ಮನೀಶ್ ಸಿಸೋಡಿಯಾ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಹೇಳಿದರು. ಭ್ರಷ್ಟಾಚಾರದಲ್ಲಿ ಕೇಜ್ರಿವಾಲ್ ಎಲ್ಲ ದಾಖಲೆಗಳನ್ನು ಮುರಿಯುತ್ತಿದ್ದಾರೆ. ದೆಹಲಿ ಜನರು ಅವರ ಸೊಕ್ಕನ್ನು ಮುರಿಯಲಿದ್ದಾರೆ ಎಂದು ಹೇಳಿದರು.
ಈ ಮೊದಲು ಆರೋಪಗಳಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದ್ದೆವು. ಕೇಜ್ರಿವಾಲ್ ಪ್ರಾಮಾಣಿಕ ವ್ಯಕ್ತಿಯಾಗಿದ್ದರೆ ನಮ್ಮ ಪ್ರಶ್ನೆಗಳಿಗೆ ಏಕೆ ಉತ್ತರಿಸುತ್ತಿಲ್ಲ ಎಂದು ಕೇಳಿದರು.
ಇವನ್ನೂ ಓದಿ:ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಲೆಂದು ಇಡೀ ದೇಶ ಬಯಸುತ್ತದೆ: ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ವಿವಾದ: ಮನೀಶ್ ಸಿಸೋಡಿಯಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ದೆಹಲಿ ಅಬಕಾರಿ ನೀತಿ ನಿರೂಪಣೆ ಸಭೆಯಲ್ಲಿ ಕೆಸಿಆರ್ ಕುಟುಂಬ ಸದಸ್ಯರು ಭಾಗಿ: ಬಿಜೆಪಿ
ಮನೀಶ್ ಸಿಸೋಡಿಯಾಗೆ ಲುಕ್ ಔಟ್ ನೋಟಿಸ್ ನೀಡಿಲ್ಲ: ಸಿಬಿಐ ಸ್ಪಷ್ಟನೆ
ಮುಕ್ತವಾಗಿ ಓಡಾಡುತ್ತಿದ್ದೇನೆ, ಎಲ್ಲಿಗೆ ಬರಬೇಕು ಹೇಳಿ: ಮೋದಿಗೆ ಸಿಸೋಡಿಯಾ ಸವಾಲು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.