ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ.ಪ್ರದೇಶದಲ್ಲಿ ಎಎ‍ಪಿ ಅಧಿಕಾರಕ್ಕೆ ಬಂದರೆ ವಿದ್ಯುತ್, ಶಿಕ್ಷಣ ಉಚಿತ: ಕ್ರೇಜಿವಾಲ್

Last Updated 14 ಮಾರ್ಚ್ 2023, 12:39 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್‌, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್‌ ಮಂಗಳವಾರ ಘೋಷಿಸಿದ್ದಾರೆ.

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‌ನ ದಸರಾ ಮೈದಾನದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು, ‘ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದರೆ ನೌಕರರ ಸೇವೆಯನ್ನು ಖಾಯಂಗೊಳಿಸುವುದರ ಜತೆಗೆ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ನೀಡಿ, ದೆಹಲಿ ಮತ್ತು ಪಂಜಾಬ್‌ನಂತೆ ನಾನು ಮಧ್ಯಪ್ರದೇಶದಲ್ಲಿಯೂ ಉಚಿತ ವಿದ್ಯುತ್‌ ನೀಡುತ್ತೇನೆ’ ಎಂದು ಕ್ರೇಜಿವಾಲ್‌ ಹೇಳಿದರು.

ದೆಹಲಿ ಮತ್ತು ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಮಾಡಿರುವ ಕೆಲಸಗಳನ್ನು ಒತ್ತಿ ಹೇಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಮಧ್ಯಪ್ರದೇಶದಲ್ಲಿ ಎಎಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT