ನವದೆಹಲಿ: ‘ದೇಶ ಮತ್ತು ಜನ ಸಂಕಷ್ಟದಲ್ಲಿದ್ದಾರೆ. ನಮ್ಮ ಪಕ್ಷದ ಸ್ವಯಂ ಸೇವಕರು ಸಾಧ್ಯವಿರುವ ಎಲ್ಲ ಹಂತಗಳಲ್ಲೂ ಜನರ ಸಹಾಯಕ್ಕೆ ನಿಲ್ಲಬೇಕು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಮನವಿ ಮಾಡಿದರು.

ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನದ ನೆನಪಿನಲ್ಲಿ ಗುರುವಾರ ಟ್ವೀಟ್ ಮಾಡಿರುವ ಅವರು, ‘ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪಕ್ಷದ ಕಾರ್ಯಕರ್ತರು ಜನರ ಸೇವೆಗೆ ನಿಲ್ಲಬೇಕು‘ ಎಂದು ತಿಳಿಸಿದ್ದಾರೆ.

‘ಇಂದು ನಮ್ಮ ಪಕ್ಷದ ಎಂಟನೇ ಪ್ರತಿಷ್ಠಾನ ದಿನ. ನಿಮ್ಮೆಲ್ಲರಿಗೂ ಅಭಿನಂದನೆಗಳು. ಸಂಕಷ್ಟದ ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯಲ್ಲೂ ಜನರಿಗೆ ನೆರವಾಗಿ. ಮಾಸ್ಕ್ ವಿತರಿಸಿ, ಅನಾರೋಗ್ಯದಿಂದ ಬಳಲುವವರಿಗೆ ಆಸ್ಪತ್ರೆಗೆ ಹೋಗಲು ವಾಹನ ವ್ಯವಸ್ಥೆ ಕಲ್ಪಿಸಿ. ಹಸಿದವರಿಗೆ ಆಹಾರ ನೀಡಿ. ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬೇಡಿ‘ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.