ತಿರುವನಂತಪುರ: ವಿಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ವಿಜ್ಞಾನ ಪಾರ್ಕ್ ಸ್ಥಾಪಿಸಲು ಕೇರಳ ಸರ್ಕಾರ ನಿರ್ಧರಿಸಿದೆ.
ನೂತನ ಯೋಜನೆಗೆ ಮಾ.23ರಂದು ಕೇರಳ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಶೈಕ್ಷಣಿಕ ಸಂಸ್ಥೆಗಳು, ಹೈ–ಟೆಕ್ ಕಂಪನಿಗಳು, ಉದ್ಯಮಿಗಳು ಮತ್ತು ಸ್ಟಾರ್ಟಪ್‌ಗಳಿಗೆ ನೆರವಾಗಲಿದೆ.
₹600 ಕೋಟಿ ವೆಚ್ಚದಲ್ಲಿ ಮೂರು ವಿಜ್ಞಾನ ಪಾರ್ಕ್ ಆರಂಭಿಸುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.
ವಿಜ್ಞಾನ ಪಾರ್ಕ್ ಮೂಲಕ ನೂತನ ತಂತ್ರಜ್ಞಾನ ಮತ್ತು ಉತ್ಪನ್ನ ಅಭಿವೃದ್ಧಿಗೆ ವಿಶ್ವದರ್ಜೆಯ ಪ್ರತಿಭೆಗಳನ್ನು ಸೆಳೆಯಲು ಕೇರಳ ಯೋಜನೆ ರೂಪಿಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.