ಗುರುವಾರ , ಸೆಪ್ಟೆಂಬರ್ 23, 2021
26 °C

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕಿನ ಶಂಕೆ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್‌ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 12 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಶನಿವಾರ ತಿಳಿಸಿವೆ.

ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿರುವ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ತಡರಾತ್ರಿ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ರಾಜ್ಯದಲ್ಲಿ ನಿಫಾ ವೈರಸ್ ಇರುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಅಧಿಕೃತವಾಗಿ ಘೋಷಿಸದಿದ್ದರೂ, ಆರೋಗ್ಯ ಸಚಿವರು ಭಾನುವಾರ ಬೆಳಿಗ್ಗೆ ಕೋಯಿಕ್ಕೋಡ್‌ಗೆ ಧಾವಿಸಿ ಪರಿಸ್ಥಿತಿಯ ಅವಲೋಕನ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನೀರೀಕ್ಷಿಸಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ರೋಗ (ಎನ್ಐವಿ) ಮೇ 19, 2018 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿತ್ತು. 2018ರ ಜೂನ್ 1 ರವರೆಗೆ ರಾಜ್ಯದಲ್ಲಿ 17 ಸಾವುಗಳಿಗೆ ಮತ್ತು 18 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು