ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ನಿಫಾ ವೈರಸ್‌‌ನಿಂದ 12 ವರ್ಷದ ಬಾಲಕ ಸಾವು

Last Updated 5 ಸೆಪ್ಟೆಂಬರ್ 2021, 3:35 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌: ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.

ಪರೀಕ್ಷೆಗೆಂದು ಕಳುಹಿಸಿದ ಬಾಲಕನ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ದೃಢಪಡಿಸಿದೆ.

'ದುರದೃಷ್ಟವಶಾತ್, ಬಾಲಕ ಬೆಳಿಗ್ಗೆ 5 ಗಂಟೆಗೆ ಮೃತಪಟ್ಟಿದ್ದಾನೆ. ನಿನ್ನೆ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿತ್ತು. ನಿನ್ನೆ ರಾತ್ರಿಯೇ ನಾವು ವಿವಿಧ ತಂಡಗಳನ್ನು ರಚಿಸಿದ್ದು, ನಿಫಾ ವೈರಸ್ ಪ್ರಕರಣಗಳ ಪತ್ತೆಹಚ್ಚುವಿಕೆಯನ್ನು ಆರಂಭಿಸಿದ್ದೇವೆ. ಬಾಲಕನ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪ್ರತ್ಯೇಕಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ' ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಿಫಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೇರಳದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ತಂಡ ಭೇಟಿ ನೀಡಲಿದೆ.

ದಕ್ಷಿಣ ಭಾರತದಲ್ಲಿಯೇ ಮೊದಲ ನಿಫಾ ವೈರಸ್ ಮೇ 19, 2018 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿತ್ತು. ಜೂನ್ 1, 2018ರ ವೇಳೆಗೆ 17 ಜನರು ಮೃತಪಟ್ಟು, 18 ಜನರಲ್ಲಿ ಸೋಂಕು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT