ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕೋವಿಡ್‌ ಬಿಕ್ಕಟ್ಟು ಎದುರಿಸಲು ₹20 ಸಾವಿರ ಕೋಟಿ ಪ್ಯಾಕೇಜ್‌ ಘೋಷಣೆ

ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ್
Last Updated 4 ಜೂನ್ 2021, 5:37 IST
ಅಕ್ಷರ ಗಾತ್ರ

ತಿರುವನಂತಪುರಂ: ಕೋವಿಡ್‌ 19 ಪಿಡುಗಿನ ಎರಡನೇ ಅಲೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಕೇರಳ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ₹20ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದೆ.

ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದ್ದು, ಇದರಲ್ಲಿ ಕೋವಿಡ್‌ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್‌ ಅನ್ನು ಪ್ರಕಟಿಸಿದರು.

ಈ ಹಣಕಾಸಿನ ಪ್ಯಾಕೇಜ್‌ ಜೊತೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ₹ 1 ಸಾವಿರ ಕೋಟಿ ಹಣವನ್ನು ತೆಗೆದಿರಿಸಿದ್ದಾರೆ. ಹಾಗೆಯೇ ಉಚಿತ ಲಸಿಕೆ ನೀಡಲು ಬೇಕಾದ ಉಪಕರಣಗಳು ಮತ್ತು ಸೌಲಭ್ಯಗಳಿಗಾಗಿ ಹೆಚ್ಚುವರಿಯಾಗಿ ₹500 ಕೋಟಿ ಮೀಸಲಿಟ್ಟಿರುವುದಾಗಿ ಅವರು ತಿಳಿಸಿದರು.

‘ಕೋವಿಡ್‌ ಪರಿಹಾರ ಕಾರ್ಯಗಳಿಗೆ ಹಿಂದಿನ ಸರ್ಕಾರ ತೆಗೆದಿಟ್ಟಿದ್ದ ₹20 ಸಾವಿರ ಕೋಟಿ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗಿದೆ ಎಂದು ತಿಳಿಸಿದ ಹಣಕಾಸು ಸಚಿವರು, ‘ಕೋವಿಡ್ 19 ಎರಡನೇ ಅಲೆಯ ಬಿಕ್ಕಟ್ಟನ್ನು ಎದುರಿಸಲು ₹20 ಸಾವಿರ ಕೋಟಿ ಹಣವನ್ನು ಮೀಸಲಿಡಲಾಗಿದೆ‘ ಎಂದರು.

ನೂತನ ಬಜೆಟ್‌ಲ್ಲಿ ಆರೋಗ್ಯ ಮತ್ತು ಆಹಾರ ಭದ್ರತೆಗೆ ಒತ್ತು ನೀಡಲಾಗಿದೆ ಎಂದು ಹೇಳಿದ ಸಚಿವರು, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT