ಶುಕ್ರವಾರ, ಏಪ್ರಿಲ್ 23, 2021
28 °C

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಬಿಜೆಪಿಗೆ ಅಧಿಕೃತ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

Metro Man' E Sreedharan being garlanded as he formally joins Bharatiya Janata Party (BJP), in Malappuram, Thursday, Feb. 25, 2021. Credit: PTI Photo

ಮಲಪ್ಪುರಂ: ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ವಿಜಯ ಯಾತ್ರೆ’ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ನಾಯಕರು ಹೇಳಿದ್ದಾರೆ.

ಓದಿ: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಜತೆಗೆ ಸಿಎಂ ಆಗಲು ಸಿದ್ಧ: ಇ. ಶ್ರೀಧರನ್‌

ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಳಿಕ ಮಾತನಾಡಿದ ಶ್ರೀಧರನ್, ಇದು ಬದುಕಿನಲ್ಲಿ ಅತ್ಯಂತ ಮಹತ್ವದ ಕ್ಷಣ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬಿಜೆಪಿ ಸೇರುವುದಾಗಿ ಶ್ರೀಧರನ್ ಇತ್ತೀಚೆಗೆ ಘೋಷಿಸಿದ್ದರು. ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದರು. ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಓದಿ: ಲವ್ ಜಿಹಾದ್ ವಿಷಯದಲ್ಲಿ ಬಿಜೆಪಿ ಬೆಂಬಲಿಸಿದ ಇ. ಶ್ರೀಧರನ್

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು